BEL ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳು: ತಿಂಗಳಿಗೆ ₹50,000 ವೇತನ; ಅಕ್ಟೋಬರ್ 23 ಕೊನೆಯ ದಿನ!

job

BEL Recruitment

ಉತ್ತಮ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತ ಸರ್ಕಾರದ ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಬೆಂಗಳೂರಿನಲ್ಲಿ ಪ್ರಾಜೆಕ್ಟ್ ಎಂಜಿನಿಯರ್-I ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಉತ್ತಮ ಅವಕಾಶವಾಗಬಹುದು.

BEL Recruitment

ನೇಮಕಾತಿಯ ಪ್ರಮುಖ ಮುಖ್ಯಾಂಶಗಳು

ವಿವರಗಳುಮಾಹಿತಿ
ಸಂಸ್ಥೆಯ Hesaruಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಬೆಂಗಳೂರು
ಹುದ್ದೆಯ Hesaruಪ್ರಾಜೆಕ್ಟ್ ಎಂಜಿನಿಯರ್-I
Ottu Huddegalu14
Udyoga Sthalaಬೆಂಗಳೂರು, ಕರ್ನಾಟಕ
Masika Vetana₹50,000/-
Arji Sallisuva VidhanaOnline
Arji Sallisalu Kone Dinanka23 October 2026

ವಿಭಾಗವಾರು ಹುದ್ದೆಗಳ ಸಂಖ್ಯೆ

  • ಎಲೆಕ್ಟ್ರಾನಿಕ್ಸ್ ವಿಭಾಗ: 08 ಹುದ್ದೆಗಳು
  • ಕಂಪ್ಯೂಟರ್ ಸೈನ್ಸ್ ವಿಭಾಗ: 06 ಹುದ್ದೆಗಳು
  • ಒಟ್ಟು: 14 ಹುದ್ದೆಗಳು

ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು

  • ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ BE, B.Tech ಅಥವಾ B.Sc (Engineering) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
  • ವಯೋಮಿತಿ (Age Limit): BEL ಅಧಿಸೂಚನೆ ಪ್ರಕಾರ, 01 ಅಕ್ಟೋಬರ್ 2026ಕ್ಕೆ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 32 ವರ್ಷಗಳು.
  • ವಯೋಮಿತಿ ಸಡಿಲಿಕೆ (Relaxation):
    • OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
    • SC / ST ಅಭ್ಯರ್ಥಿಗಳಿಗೆ: 5 ವರ್ಷಗಳು
    • PwBD ಅಭ್ಯರ್ಥಿಗಳಿಗೆ: 10 ವರ್ಷಗಳು

ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ

  • ಸಾಮಾನ್ಯ / UR / OBC / EWS ಅಭ್ಯರ್ಥಿಗಳಿಗೆ: ₹400/- (SBI Collect ಮೂಲಕ ಶುಲ್ಕ ಪಾವತಿ)
  • SC / ST / PWD ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇರುವುದಿಲ್ಲ (ಸಂಪೂರ್ಣ ಉಚಿತ).

ಅರ್ಜಿ ಸಲ್ಲಿಸುವ ಸರಳ ಹಂತಗಳು

  1. BEL ಅಧಿಸೂಚನೆ ಮತ್ತು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಲಿಂಕ್ ತೆರೆಯಿರಿ.
  2. ಅರ್ಜಿ ನಮೂನೆಯಲ್ಲಿ ಕೇಳಿರುವ ವೈಯಕ್ತಿಕ ವಿವರಗಳು, ವಿದ್ಯಾರ್ಹತೆ ಮತ್ತು ಅನುಭವದ ಮಾಹಿತಿಯನ್ನು ಸರಿಯಾಗಿ ನಮೂದಿಸಿ.
  3. SBI Collect ಮೂಲಕ ಶುಲ್ಕ ಪಾವತಿ ಮಾಡಿ reference ಸಂಖ್ಯೆ ಸುರಕ್ಷಿತವಾಗಿ ಇಟ್ಟುಕೊಳ್ಳಿ.
  4. ಅರ್ಜಿ ನಮೂನೆಯಲ್ಲಿ ಎಲ್ಲಾ ವಿವರಗಳನ್ನು ಪರಿಶೀಲಿಸಿ 23-10-2026 ರೊಳಗಾಗಿ submit ಮಾಡಿ.
  5. Printout ತೆಗೆದು ನಿಮ್ಮಲ್ಲಿ ಸುರಕ್ಷಿತವಾಗಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು

ವಿವರಗಳುದಿನಾಂಕ
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ09 ಅಕ್ಟೋಬರ್ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ23 ಅಕ್ಟೋಬರ್ 2026

ಎಂಜಿನಿಯರಿಂಗ್ ಮುಗಿಸಿ ಬೆಂಗಳೂರಿನಲ್ಲಿ ನೆಲೆಸುವುದಕ್ಕೆ ಮನಸ್ಸು ಇರುವ ಅಭ್ಯರ್ಥಿಗಳು ತಡ ಮಾಡದೆ ಅರ್ಜಿ ಸಲ್ಲಿಸಿ. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಮತ್ತು WhatsApp ಗ್ರೂಪ್‌ಗಳಲ್ಲಿ ಶೇರ್ ಮಾಡಿ!

Trending

Load More...